ಈಗ ಆರೋಗ್ಯ ಸಚಿವರಾಗಿರುವ ಅರವಿಂದ ಲಿಂಬಾವಳಿಯವರು ಮಹದೇವಪುರದ ಶಾಸಕರಾದ ಕ್ಷಣದಿಂದಲೂ ಸ್ವಾಸ್ಥ್ಯವನ್ನು ಅತ್ಯಂತ ಜತನದಿಂದ ನೋಡಿಕೊಂಡಿದ್ದಾರೆ.

  • ಎರಡು ಮೆಗಾ ಹೆಲ್ತ್ ಕ್ಯಾಂಪ್‌ಗಳೂ ಸೇರಿದಂತೆ ಆರು ವೈದ್ಯಕೀಯ ಶಿಬಿರಗಳು ನಡೆದಿವೆ. ವರ್ತೂರಿನಲ್ಲಿ ನಡೆದ ಮೊದಲ ಮೆಗಾ ಹೆಲ್ತ್ ಕ್ಯಾಂಪಿನಲ್ಲಿ ೧೩೭೦೦ ರೋಗಿಗಳನ್ನು ಉಚಿತ ಬಸ್ ವ್ಯವಸ್ಥೆಯ ಮೂಲಕ ಕರೆತಂದು ಎರಡು ದಿನ ಊಟದ ವ್ಯವಸ್ಥೆಯನ್ನೂ ಮಾಡಿ, ಹತ್ತು ದಿನಗಳಿಗಾಗುವಷ್ಟು ಔಷಧಗಳನ್ನೂ ಉಚಿತವಾಗಿ ನೀಡಿದ ಅಗ್ಗಳಿಕೆ ಅರವಿಂದ ಲಿಂಬಾವಳಿಯವರ ಸಂಘಟನಾ ಸಾಮರ್ಥ್ಯಕ್ಕೆ ದೊರಕುವ ನಿದರ್ಶನ. ಇತ್ತೀಚೆಗಷ್ಟೆ ಕಾಡುಗೋಡಿಯಲ್ಲಿ ಎರಡನೇ ಬೃಹತ್ ಆರೋಗ್ಯ ಮೇಳ ನಡೆದು ೧೬ ಸಾವಿರ ಜನ ಆರೋಗ್ಯ ತಪಾಸಣೆ ಮಾಡಿಸಿಕೊಂಡರು; ಉಚಿತ ಔಷಧಗಳನ್ನೂ ಪಡೆದರು. ಈ ಶಿಬಿರಗಳಲ್ಲಿ ಕಂಡು ಬಂದ ದೊಡ್ಡ ರೋಗಗಳಿಗೆ ದೊಡ್ಡ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿಸಲು ಪಕ್ಷದ ಕಾರ್ಯಕರ್ತರು, ಅರವಿಂದ ಲಿಂಬಾವಳಿಯವರ ಅಭಿಮಾನಿಗಳು ಸ್ವತಃ ತಮ್ಮ ಖಾಸಗಿ ದೇಣಿಗೆಯನ್ನು ನೀಡಿ ಸಮಾಜಪ್ರೇಮ ಮೆರೆದಿದ್ದಾರೆ. ಕಣ್ಣಿನ ಶಸ್ತ್ರಚಿಕಿತ್ಸೆಗಳೆಲ್ಲವೂ ಉಚಿತವಾಗಿ ನಡೆದಿವೆ.

  • ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ಕ್ಷೇತ್ರದಲ್ಲಿ ಚಿಕಿತ್ಸೆಯ ನೆರವು ಕೋರಿದ ನೂರಾರು ಜನರಿಗೆ ಸಾಧ್ಯವಾದಷ್ಟೂ ಗರಿಷ್ಠ ಪ್ರಮಾಣದ ನೆರವು ದೊರಕುವಲ್ಲಿ ಅರವಿಂದ ಲಿಂಬಾವಳಿ ಶ್ರಮಿಸಿದ್ದಾರೆ.
  • ಕ್ಷೇತ್ರದ ಆರೋಗ್ಯ ಸೌಲಭ್ಯಗಳು ಹೆಚ್ಚಾಗಬೇಕು ಎಂಬ ನಿಟ್ಟಿನಲ್ಲಿ ಅರವಿಂದ ಲಿಂಬಾವಳಿಯವರು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ.

  •  ಮಂಡೂರಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಬಂದಿದೆ. ಕಾಡುಗೋಡಿ, ದೊಡ್ಡ ನೆಕ್ಕುಂದಿ, ವರ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಭಿವೃದ್ಧಿ ಕಾಮಗಾರಿ ಸಂಪೂರ್ಣವಾಗಿದೆ. ವರ್ತೂರು, ಆವಲಹಳ್ಳಿ, ದೊಡ್ಡ ನೆಕ್ಕುಂದಿ, ಕಾಡುಗೋಡಿ ಕೇಂದ್ರಗಳೀಗ ೨೪ಘಿ೭ ಗಂಟೆಗಳಲ್ಲೂ ಸಾರ್ವಜನಿಕ ಸೇವೆಗಾಗಿ ತೆರೆದಿರುತ್ತವೆ. ಇದಲ್ಲದೆ ದೊಡ್ಡ ನೆಕ್ಕುಂದಿ  ಆಸ್ಪತ್ರೆಯಲ್ಲೂ ಹಗಲು – ರಾತ್ರಿಯೆನ್ನದೆ ಸಾರ್ವಜನಿಕರಿಗಾಗಿ ಸೇವೆ ನೀಡಲಾಗುತ್ತಿದೆ.
  • ಹಗದೂರು ವಾರ್ಡಿನ ಸಿದ್ದಾಪುರ ಗ್ರಾಮದಲ್ಲಿ ೧೦೦ ಹಾಸಿಗೆಗಳ ಆಸ್ಪತ್ರೆಯನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ.

  • ಆವಲಹಳ್ಳಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಸ್ಥಾಪನೆಯಾಗಲಿದೆ.
  • ಕೊಡತಿ, ಹಾಲನಾಯಕನಹಳ್ಳಿ, ಹೂಡಿ, ಕಣ್ಣೂರು, ಬಿದರಹಳ್ಳಿ ಮತ್ತು ಮಾರತ್‌ಹಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸ್ಥಾಪನೆಯಾಗಲಿವೆ.

ಸಾಧನೆಗಳು ೨೦೦೮-೧೩

  • ಸಾಧನೆಯ ಹಾದಿಯಲ್ಲಿ ಶಿಕ್ಷಣ ಕ್ಷೇತ್ರ - ಕರ್ನಾಟಕ ರಾಜ್ಯವು ಹಲವು ದಶಕಗಳಿಂದಲೂ ದೇಶದಲ್ಲೇ ಮುಂಚೂಣಿಯಲ್ಲಿರುವ ಉನ್ನತ ಶಿಕ್ಷಣ ಕೇಂದ್ರವಾಗಿದೆ. ಅದರಲ್ಲೂ ಎಂಬತ್ತರ ದಶಕದಿಂದೀಚೆಗೆ ಕರ್ನಾಟಕದಲ್ಲಿ ನೂರಾರು ಕಾಲೇಜುಗಳು ಸ್ಥಾಪನೆಗೊಂಡಿವೆ. ೨೦೦೮ರ ಹೊತ್ತಿಗೆ ಶಿಕ್ಷಣ ರಂಗವು ಹಲವು… Continue Reading
  • ಶಿಬಿರ,ಮೇಳ,ಉತ್ಸವಗಳ ಸರಮಾಲೆ - ಮಹದೇವಪುರ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಹತ್ತು ಹಲವು ಮೇಳಗಳು ನಡೆದಿವೆ. ನಾಡಿನ ಮಹಾಪುರುಷರ ಜಯಂತಿಗಳನ್ನೂ ವಿಜೃಂಭಣೆಯಿಂದ ಆಚರಿಸಲಾಗಿದೆ.ಯುಗಾದಿ ಹಬ್ಬವೇ ಮಹದೇವಪುರ ಮೇಳವಾಗಿ ರೂಪಾಂತರಗೊಂಡು ಸಾವಿರಾರು ಕುಟುಂಬಗಳನ್ನು… Continue Reading
  • ಧಾರ್ಮಿಕತೆ, ಸಾಮರಸ್ಯದ ತಂಗಾಳಿ - ಸ್ವಾಮಿ ವಿವೇಕಾನಂದ, ವೇಮನ, ಕೆಂಪೇಗೌಡ, ಬಸವೇಶ್ವರ, ಕನಕದಾಸರು, ಡಾ|| ಬಿ.ಆರ್. ಆಂಬೇಡ್ಕರ್, ಬಾಬು ಜಗಜೀವನರಾಂ, ದ್ರೌಪದಮ್ಮ, ಸಿದ್ಧರಾಮೇಶ್ವರರು, ಸ್ವಾಮಿ ಯೋಗಿನಾರಾಯಣ, ಸೋದರಿ ನಿವೇದಿತಾ, ಪಂ| ದೀನದಯಾಳ ಉಪಾಧ್ಯಾಯ… Continue Reading
  • ಕಾದಿದ್ದರು ೩೦ ವರ್ಷ; ಈಗ ಮೂಡಿತು ಹರ್ಷ! - ಎಲ್ಲೆಲ್ಲೂ ಶಾಂತಿ-ಸೌಹಾರ್ದ; ಅಪರಾಧ ಪ್ರಮಾಣ ಇಳಿಕೆ: ಬೆಂಗಳೂರು ನಗರದ ಸರಾಸರಿ ಅಪರಾಧ ಪ್ರಮಾಣ ಹೆಚ್ಚಾಗುತ್ತಿದ್ದರೆ, ಮಹದೇವಪುರ ಕ್ಷೇತ್ರದಲ್ಲಿ ಅಪರಾಧಪ್ರಮಾಣವು ಏನಿಲ್ಲೆಂದರೂ ಶೇ. ೨೫ರಷ್ಟು ಕಡಿಮೆಯಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ… Continue Reading
  • ಸಾಮಾಜಿಕ ಅಭ್ಯುದಯದ ದೃಢ ಹೆಜ್ಜೆಗಳು - ಯುವಕರಿಗೆ ಕೆಲಸ ದೊರಕಿಸಲು ಉದ್ಯೋಗ ಮೇಳ, ಸಾರ್ವಜನಿಕ ಬಳಕೆಗಾಗಿ ಹಲವೆಡೆ ಸಮುದಾಯ ಭವನಗಳು, ಸುರಕ್ಷತೆಗಾಗಿ ಪೊಲೀಸ್ ಠಾಣೆ, ಅಗ್ನಿಶಾಮಕ ಠಾಣೆ, ಸುಸಜ್ಜಿತ ವಿದ್ಯುತ್ ಚಿತಾಗಾರ, ದುರ್ಬಲರು, ಅಶಿಕ್ಷಿತರಿಗೆ… Continue Reading
  • ಅಪಾರ್ಟ್ಮೆಂಟ್ ನಿವಾಸಿಗಳ ಬವಣೆ ಪರಿಹಾರ - ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಅಪಾರ್ಟ್‌ಮೆಂಟ್‌ಗಳಿವೆ. ಇಲ್ಲಿನ ನಿವಾಸಿಗಳು ರೆಸಿಡೆಂಟ್ ವೆಲ್‌ಫೇರ್ ಅಸೋಸಿಯೇಶನ್ ಸ್ಥಾಪಿಸಿಕೊಂಡಿದ್ದಾರೆ. ಅರವಿಂದ ಲಿಂಬಾವಳಿಯವರ ಬಳಿ ಅವರು ಹಲವು ಸಮಸ್ಯೆಗಳ ಬಗ್ಗೆ ನಿವೇದಿಸಿಕೊಂಡಿದ್ದರು. ಅವುಗಳಲ್ಲಿ… Continue Reading
  • ಇಪಿಐಪಿ ಅಭಿವೃದ್ಧಿಯ ಯಶೋಗಾಥೆ - ವೈಟ್‌ಫೀಲ್ಡ್‌ನ ಇಪಿಐಪಿ ವಲಯದಲ್ಲಿ ರಸ್ತೆ, ಮಳೆ ನೀರು ಕೊಯ್ಲು, ಕಾಲುದಾರಿ ಸುಧಾರಣೆ ಮತ್ತು ಡಾಂಬರೀಕರಣದ ಕೆಲಸಗಳು ಭರದಿಂದ ಸಾಗಿವೆ. ಇಲ್ಲಿನ ನಾಲ್ಕು ಸಾಲಿನ (೪ ಲೇನ್) ೫.೫… Continue Reading
  • ಸಾರಿಗೆ ವ್ಯವಸ್ಥೆಯಲ್ಲಿ ಸುಧಾರಣೆ - ಕಳೆದ ನಾಲ್ಕು ವರ್ಷಗಳಲ್ಲಿ ಮಹದೇವಪುರದ ಸಾರಿಗೆ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ರೂಪಾಂತರಿಸಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಮಹದೇವಪುರಕ್ಕೆ ಪ್ರತಿ ನಿಮಿಷಕ್ಕೆ ಒಂದರಂತೆ ವೋಲ್ವೋ ಬಸ್ (ಸಂಖ್ಯೆ ೩೩೫ಇ) ಸೌಕರ್ಯವನ್ನು… Continue Reading
  • ಅಕ್ಷರ ಕ್ರಾಂತಿಯ ಹೊಸ ಅಧ್ಯಾಯ - ಅರವಿಂದ ಲಿಂಬಾವಳಿ ಶಿಕ್ಷಣ ರಂಗದಲ್ಲೇ ಹೋರಾಟ ಮಾಡುತ್ತಲೇ ಬೆಳೆದ ಯುವ ನಾಯಕರು. ಶಾಸಕರಾದ ಮೇಲೆ ಮಹದೇವಪುರದಲ್ಲಿ ಶಿಕ್ಷಣ ಕ್ರಾಂತಿಗೆ ಅವರು ಮಾಡಿದ ಯತ್ನಗಳನ್ನು ಕಣ್ಣಾರೆ ಕಾಣಬಹುದು. ವರ್ತೂರು… Continue Reading
  • ಮನೆಗೆ ದೀಪ, ಬೀದಿಗೆ ಬೆಳಕು - ೨೦೦೮ರಲಿ ಮಹದೇವಪುರ ಕ್ಷೇತ್ರದ ಹಲವು ಪ್ರದೇಶಗಳು ಬೀದಿ ದೀಪಗಳಿಂದ ವಂಚಿತವಾಗಿದ್ದವು. ವಿದ್ಯುತ್ ಲೈನ್‌ಗಳೂ ಇಲ್ಲ, ಕಂಬಗಳೂ ಇಲ್ಲದಂಥ ಸ್ಥಿತಿ. ಅರವಿಂದ ಲಿಂಬಾವಳಿಯವರು ವಿದ್ಯುತ್ ಸಂಪರ್ಕ, ಬೀದಿ ದೀಪ,… Continue Reading