ಅವಲಹಳ್ಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಜಿ.ಕೆ. ಗೌರಮ್ಮ ಮತ್ತು ಪ್ರಕಾಶ್ ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಪಕ್ಷಕ್ಕೆ ಸೇರಿದರು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳಿಂದ ಪ್ರೇರಿತಗೊಂಡು ಮತ್ತು ಮಹದೇವಪುರ ಕ್ಷೇತ್ರ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವುದನ್ನು ಮನಗಂಡು ತಾವು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವುದಾಗಿ ಹೇಳಿದ್ದಾರೆ.
ಮಹದೇವಪುರ ಗ್ರಾಮೀಣ ಬಿಜೆಪಿ ಅಧ್ಯಕ್ಷ ನಟರಾಜ್, ವಾರ್ಡ್ ನ ಅಧ್ಯಕ್ಷ ರಾಜು, ಕೆಂಪೇಗೌಡ, ಪಾಪಣ್ಣ ಮತ್ತಿತರರು ಉಪಸ್ಥಿತರಿದ್ದರು.