ಕಾಂಗ್ರೆಸ್ ಸರ್ಕಾರದ ನೇತೃತ್ವದಲ್ಲಿ ರಾಜ್ಯದ ರಾಜಧಾನಿಯಲ್ಲಿ‌ ನಡೆಯುತ್ತಿರುವ ಗೂಂಡಾಗಿರಿಯನ್ನು‌ ಖಂಡಿಸಿ ನಡೆಯುತ್ತಿರುವ ‘ಬೆಂಗಳೂರು ರಕ್ಷಿಸಿ’ ಪಾದಯಾತ್ರೆ ಶುಕ್ರವಾರದಂದು ಸರ್ವಜ್ಞ ನಗರ ತಲುಪಿತು.

ಈ ಸಂದರ್ಭದಲ್ಲಿ ನೆರೆದಿದ್ದ ಜನಸ್ತೋಮವನ್ನು ಉದ್ದೇಶಿಸಿ ನಾನು ಮಾತನಾಡಿದೆ ಹಾಗೂ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದಾಗಿ ರಾಜ್ಯ ರಾಜಧಾನಿಯ ಜನರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಕರ್ನಾಟಕ ಲೋಕಾಯುಕ್ತರ ಮೇಲಿನ ದಾಳಿ ಕುರಿತು ಮಾತನಾಡಿದೆ.

ಸಹಸ್ರಾರು ಸಂಖ್ಯೆಯಲ್ಲಿ ‌ಈ ಪಾದಯಾತ್ರೆಯಲ್ಲಿ ಭಾಗವಹಿಸಿದ ಜನರು ಕಾಂಗ್ರೆಸ್‌ ಪಕ್ಷದ ಗೂಂಡಾಗಿರಿ ಮತ್ತು ದುರಾಡಳಿತಕ್ಕೆ ಕೊನೆ ಹಾಡುವ ಪಣ ತೊಟ್ಟರು. ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್, ಸಂಸದರಾದ ಪಿ.ಸಿ. ಮೋಹನ್ ಮತ್ತು ಇತರ ಬಿಜೆಪಿ ಮುಖಂಡರು ಹಾಜರಿದ್ದರು.