ಕೋಲಾರ ನಗರದಲ್ಲಿ ಭೋವಿ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ‌ ಭಾಗವಹಿಸಿದ್ದೆ. ದೇಶದ ಅಭಿವೃದ್ಧಿಗೆ ಪ್ರಧಾನಿ ಮೋದಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ಇವರ ಅಧಿಕಾರದ ಈ ಐದು ವರ್ಷಗಳಲ್ಲಿ ಸಮಾಜ ಅಭಿವೃದ್ಧಿಯತ್ತ ಸಾಗಿದೆ‌. ಇವರು ಮತ್ತೆ ಅಧಿಕಾರಕ್ಕೆ ಬಂದರೆ ಭೋವಿ ಸಮುದಾಯ ಮತ್ತಷ್ಟು ಪ್ರಗತಿ ಕಾಣುತ್ತದೆ. ಹೀಗಾಗಿ ಎಲ್ಲರೂ ಕ್ಷೇತ್ರದ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸಬೇಕು. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಶ್ರಮಿಸಬೇಕು ಎಂದು ತಿಳಿಸಲಾಯಿತು.