ಮಹದೇವಪುರ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಹತ್ತು ಹಲವು ಮೇಳಗಳು ನಡೆದಿವೆ. ನಾಡಿನ ಮಹಾಪುರುಷರ ಜಯಂತಿಗಳನ್ನೂ ವಿಜೃಂಭಣೆಯಿಂದ ಆಚರಿಸಲಾಗಿದೆ.ಯುಗಾದಿ ಹಬ್ಬವೇ ಮಹದೇವಪುರ ಮೇಳವಾಗಿ ರೂಪಾಂತರಗೊಂಡು ಸಾವಿರಾರು ಕುಟುಂಬಗಳನ್ನು ಸೆಳೆದಿದೆ.

ಕ್ಷೇತ್ರದಲ್ಲಿ ಎರಡು ಉದ್ಯೋಗ ಮೇಳಗಳು ನಡೆದವು. ಇಮ್ಮಡಿಹಳ್ಳಿ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ಮೊದಲ ಮೇಳದಲ್ಲಿ ೭೦೦ ಜನರಿಗೆ ಉದ್ಯೋಗ ದೊರಕಿದರೆ, ನ್ಯೂ ಹಾರಿಜಾನ್ ಕಾಲೇಜು ಕ್ಯಾಂಪಸ್‌ನಲ್ಲಿ ನಡೆದ ಎರಡನೇ ಮೇಳದಲ್ಲಿ ೮೧೦ ಜನರಿಗೆ ಕೆಲಸ ಸಿಕ್ಕಿತು.

ಮೊದಲ ವರ್ಷ ಮಹದೇವಪುರದಲ್ಲಿ ಆಚರಿಸಿದ ಯುಗಾದಿ ಉತ್ಸವವು ಮರುವರ್ಷದಿಂದ `ಮಹದೇವಪುರ ಉತ್ಸವ’ವಾಗಿ ಹೊಸ ವಿಶಾಲ ರೂಪ ತಳೆಯಿತು. ಅಂದಿನಿಂದ ಪ್ರತಿವರ್ಷ ಯುಗಾದಿಯಂದು `ಮಹದೇವಪುರ ಉತ್ಸವ’ ಇಡೀ ಕ್ಷೇತ್ರದಲ್ಲಿ ಸಾಂಸ್ಕೃತಿಕ ಕಂಪು ಬೀರಿದೆ; ಕ್ಷೇತ್ರದ ಜನರಲ್ಲಿ ಸೌಹಾರ್ದದ, ಅಭಿಮಾನದ ವಾತಾವರಣ ಮೂಡಿಸಿದೆ. ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರತಿಭಾನ್ವೇಷಣೆ ಮಾಡಿ ಆಯ್ಕೆ ಮಾಡಿದ ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ನೀಡಲಾಗಿದೆ. ಕ್ಷೇತ್ರದಲ್ಲಿ ವಾಸಿಸುವ ಸಾಂಸ್ಕೃತಿಕ ರಂಗದ ಸಾಧಕರಿಗೆ ಸನ್ಮಾನ ಮಾಡುವ ಪರಂಪರೆಯನ್ನು ಆರಂಭಿಸಲಾಗಿದೆ. ಎಲ್ಲ ಪಕ್ಷಗಳ ಕಾರ್ಯಕರ್ತರು ಕುಟುಂಬ ಸಮೇತರಾಗಿ ಉತ್ಸವಕ್ಕೆ ಬಂದು ಸಡಗರದಿಂದ ಪಾಲ್ಗೊಳ್ಳುವುದು ವಿಶೇಷ.

ಪ್ರತಿವರ್ಷ ಜನವರಿ ೧೨ರ ವಿವೇಕಾನಂದ ಜಯಂತಿಯನ್ನು ಯುವಜನೋತ್ಸವ ಎಂದು ಪ್ರತಿವರ್ಷವೂ ಆಚರಿಸಿಕೊಂಡು ಬರಲಾಗಿದೆ. ವಿವೇಕಾನಂದರ ಭಾವಚಿತ್ರ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಸಂದರ್ಭದಲ್ಲಿ ನಡೆಯುತ್ತವೆ. ಕ್ರಿಕೆಟ್ ವಾಲಿಬಾಲ್ ಪಂದ್ಯಾವಳಿಗೂ ನಡೆಯುತ್ತವೆ.

ದೀಪಾವಳಿ ಬಂದರೆ ಸಾಕು, `ದೀಪಾವಳಿ ಮಿಲನ್’ ಎಂಬ ಸಂಭ್ರಮ ಸಡಗರದ ಮೇಳ ನಡೆಯುತ್ತದೆ.

ಹೀಗೆ ಯುವ ಸಮುದಾಯಕ್ಕೆ ವರದಾನವಾದ ಉದ್ಯೋಗ ಳದಿಂದ ಹಿಡಿದು, ಪ್ರತಿಭಾನ್ವೇಷಣೆವರೆಗೆ, ಆರೋಗ್ಯ ಮೇಳದಿಂದ ಹಿಡಿದು ಮಹದೇವಪುರ ಉತ್ಸವದವರೆಗೆ ಅರವಿಂದ ಲಿಂಬಾವಳಿಯವರು ಬಿಡುವಿಲ್ಲದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಲೇ ಬಂದಿದ್ದಾರೆ. ಇವೆಲ್ಲವೂ ಅವರ ವೈಯಕ್ತಿಕ ಆಸಕ್ತಿ, ಕಾಳಜಿಯಿಂದ ರೂಪಿಸಿದ ವಿಶಿಷ್ಟ ಕಾರ್ಯಕ್ರಮಗಳು ಎಂಬುದು ಗಮನಾರ್ಹ.

ನಿರಂತರ ‘ಪ್ರತಿಭಾನ್ವೇಷಣೆ’

ಮಹದೇವಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಇಂಥ ಹಲವು ಸ್ಥಳೀಯ ಪ್ರತಿಭೆಗಳನ್ನು ಗುರುತಿಸುವ ಕೆಲಸವನ್ನು ೨೦೦೮ರಿಂದಲೂ ನಡೆಸಿಕೊಂಡು ಬರಲಾಗಿದೆ. `ಪ್ರತಿಭಾನ್ವೇಷಣೆ’ ಕಾರ್ಯಕ್ರಮದ ಮೂಲಕ ಹಲವು ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಮಹದೇವಪುರ ಉತ್ಸವದಲ್ಲೂ ಪ್ರದರ್ಶನದ ಅವಕಾಶ ನೀಡಲಾಯಿತು. ಇದರಿಂದಾಗಿ ಯುವ ಪ್ರತಿಭಾ ವ್ಯಕ್ತಿತ್ವಗಳಿಗೆ ಚಹರೆ ದೊರೆತಂತಾಯಿತು.

ಮಹದೇವಪುರ ಉತ್ಸವದ ಮನೋಹರ ದೃಷ್ಯಗಳು

ಅಭ್ಯುದಯದ ಜೊತೆಗೆ ಕನ್ನಡದ ಕೈಂಕರ್ಯ

ಕನ್ನಡ ನುಡಿತೇರು ಮಹದೇವಪುರಕ್ಕೆ ಬಂದಾಗ ಅದಕ್ಕೆ ೬೦೦ ಮಹಿಳೆಯರಿಂದ ಪೂರ್ಣಕುಂಭ ಸ್ವಾಗತ ದೊರೆಯಿತು. ಬೆಂಗಳೂರಿನಲ್ಲೇ ಈ ಸಂಭ್ರಮ ವಿಶೇಷವಾಗಿತ್ತು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ಮುಖ್ಯಮಂತ್ರಿ ಚಂದ್ರುರವರೇ ಸಂತಸಪಟ್ಟರು! ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಬೈಕ್ ರ್‍ಯಾಲಿ, ಆಟೋ ರ್‍ಯಾಲಿ, – ಹೀಗೆ ಕನ್ನಡ ನುಡಿತೇರಿಗೆ ಯಥೋಚಿತ ಸಮ್ಮಾನ ನೀಡಲಾಯಿತು. ನುಡಿತೇರನ್ನು ಹೂಡಿ ರೈಲ್ವೆ ಗೇಟ್‌ನಲ್ಲಿ ಬರಮಾಡಿಕೊಂಡು ಇಬ್ಲೂರು ಜಂಕ್ಷನ್‌ನಲ್ಲಿ ಬೀಳ್ಕೊಡುವವರೆಗೂ ಈ ಸಂಭ್ರಮ ಮುಂದುವರೆಯಿತು. ಅನ್ಯಭಾಷಿಗರೂ ಗಮನಾರ್ಹ ಸಂಖ್ಯೆಯಲ್ಲಿ ಇರುವ ಮಹದೇವಪುರ ಪ್ರದೇಶಗಳಲ್ಲಿ ಸಂಚರಿಸಿದ ಕನ್ನಡ ನುಡಿತೇರಿನ ಕಲರವ ಎಲ್ಲೆಡೆ ಹಬ್ಬಿತು.

ಇದಲ್ಲದೆ, ಕನ್ನಡ ಸಂಸ್ಕೃತಿ, ನಾಡು-ನುಡಿ ಸಂರಕ್ಷಣೆಯ ಹೋರಾಟದಲ್ಲಿ ಪಾಲ್ಗೊಂಡಿರುವ ನಾಯಕರು, ಕ್ಷೇತ್ರದ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಮಹದೇವಪುರವು ಬೆಂಗಳೂರಿನಲ್ಲಿ ಕನ್ನಡದ ಕಂಪನ್ನು ಬೀರುತ್ತಿರುವ ಪ್ರಮುಖ ವಿಧಾನಸಭಾ ಕ್ಷೇತ್ರವಾಗಿದೆ.

ಸಾಧನೆಗಳು ೨೦೦೮-೧೩

  • ಸಾಧನೆಯ ಹಾದಿಯಲ್ಲಿ ಶಿಕ್ಷಣ ಕ್ಷೇತ್ರ - ಕರ್ನಾಟಕ ರಾಜ್ಯವು ಹಲವು ದಶಕಗಳಿಂದಲೂ ದೇಶದಲ್ಲೇ ಮುಂಚೂಣಿಯಲ್ಲಿರುವ ಉನ್ನತ ಶಿಕ್ಷಣ ಕೇಂದ್ರವಾಗಿದೆ. ಅದರಲ್ಲೂ ಎಂಬತ್ತರ ದಶಕದಿಂದೀಚೆಗೆ ಕರ್ನಾಟಕದಲ್ಲಿ ನೂರಾರು ಕಾಲೇಜುಗಳು ಸ್ಥಾಪನೆಗೊಂಡಿವೆ. ೨೦೦೮ರ ಹೊತ್ತಿಗೆ ಶಿಕ್ಷಣ ರಂಗವು ಹಲವು… Continue Reading
  • ಧಾರ್ಮಿಕತೆ, ಸಾಮರಸ್ಯದ ತಂಗಾಳಿ - ಸ್ವಾಮಿ ವಿವೇಕಾನಂದ, ವೇಮನ, ಕೆಂಪೇಗೌಡ, ಬಸವೇಶ್ವರ, ಕನಕದಾಸರು, ಡಾ|| ಬಿ.ಆರ್. ಆಂಬೇಡ್ಕರ್, ಬಾಬು ಜಗಜೀವನರಾಂ, ದ್ರೌಪದಮ್ಮ, ಸಿದ್ಧರಾಮೇಶ್ವರರು, ಸ್ವಾಮಿ ಯೋಗಿನಾರಾಯಣ, ಸೋದರಿ ನಿವೇದಿತಾ, ಪಂ| ದೀನದಯಾಳ ಉಪಾಧ್ಯಾಯ… Continue Reading
  • ಕಾದಿದ್ದರು ೩೦ ವರ್ಷ; ಈಗ ಮೂಡಿತು ಹರ್ಷ! - ಎಲ್ಲೆಲ್ಲೂ ಶಾಂತಿ-ಸೌಹಾರ್ದ; ಅಪರಾಧ ಪ್ರಮಾಣ ಇಳಿಕೆ: ಬೆಂಗಳೂರು ನಗರದ ಸರಾಸರಿ ಅಪರಾಧ ಪ್ರಮಾಣ ಹೆಚ್ಚಾಗುತ್ತಿದ್ದರೆ, ಮಹದೇವಪುರ ಕ್ಷೇತ್ರದಲ್ಲಿ ಅಪರಾಧಪ್ರಮಾಣವು ಏನಿಲ್ಲೆಂದರೂ ಶೇ. ೨೫ರಷ್ಟು ಕಡಿಮೆಯಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ… Continue Reading
  • ಸಾಮಾಜಿಕ ಅಭ್ಯುದಯದ ದೃಢ ಹೆಜ್ಜೆಗಳು - ಯುವಕರಿಗೆ ಕೆಲಸ ದೊರಕಿಸಲು ಉದ್ಯೋಗ ಮೇಳ, ಸಾರ್ವಜನಿಕ ಬಳಕೆಗಾಗಿ ಹಲವೆಡೆ ಸಮುದಾಯ ಭವನಗಳು, ಸುರಕ್ಷತೆಗಾಗಿ ಪೊಲೀಸ್ ಠಾಣೆ, ಅಗ್ನಿಶಾಮಕ ಠಾಣೆ, ಸುಸಜ್ಜಿತ ವಿದ್ಯುತ್ ಚಿತಾಗಾರ, ದುರ್ಬಲರು, ಅಶಿಕ್ಷಿತರಿಗೆ… Continue Reading
  • ಅಪಾರ್ಟ್ಮೆಂಟ್ ನಿವಾಸಿಗಳ ಬವಣೆ ಪರಿಹಾರ - ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಅಪಾರ್ಟ್‌ಮೆಂಟ್‌ಗಳಿವೆ. ಇಲ್ಲಿನ ನಿವಾಸಿಗಳು ರೆಸಿಡೆಂಟ್ ವೆಲ್‌ಫೇರ್ ಅಸೋಸಿಯೇಶನ್ ಸ್ಥಾಪಿಸಿಕೊಂಡಿದ್ದಾರೆ. ಅರವಿಂದ ಲಿಂಬಾವಳಿಯವರ ಬಳಿ ಅವರು ಹಲವು ಸಮಸ್ಯೆಗಳ ಬಗ್ಗೆ ನಿವೇದಿಸಿಕೊಂಡಿದ್ದರು. ಅವುಗಳಲ್ಲಿ… Continue Reading
  • ಇಪಿಐಪಿ ಅಭಿವೃದ್ಧಿಯ ಯಶೋಗಾಥೆ - ವೈಟ್‌ಫೀಲ್ಡ್‌ನ ಇಪಿಐಪಿ ವಲಯದಲ್ಲಿ ರಸ್ತೆ, ಮಳೆ ನೀರು ಕೊಯ್ಲು, ಕಾಲುದಾರಿ ಸುಧಾರಣೆ ಮತ್ತು ಡಾಂಬರೀಕರಣದ ಕೆಲಸಗಳು ಭರದಿಂದ ಸಾಗಿವೆ. ಇಲ್ಲಿನ ನಾಲ್ಕು ಸಾಲಿನ (೪ ಲೇನ್) ೫.೫… Continue Reading
  • ಸಾರಿಗೆ ವ್ಯವಸ್ಥೆಯಲ್ಲಿ ಸುಧಾರಣೆ - ಕಳೆದ ನಾಲ್ಕು ವರ್ಷಗಳಲ್ಲಿ ಮಹದೇವಪುರದ ಸಾರಿಗೆ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ರೂಪಾಂತರಿಸಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಮಹದೇವಪುರಕ್ಕೆ ಪ್ರತಿ ನಿಮಿಷಕ್ಕೆ ಒಂದರಂತೆ ವೋಲ್ವೋ ಬಸ್ (ಸಂಖ್ಯೆ ೩೩೫ಇ) ಸೌಕರ್ಯವನ್ನು… Continue Reading
  • ಆರೋಗ್ಯಕ್ಕೆ ಆದ್ಯತೆ - ಈಗ ಆರೋಗ್ಯ ಸಚಿವರಾಗಿರುವ ಅರವಿಂದ ಲಿಂಬಾವಳಿಯವರು ಮಹದೇವಪುರದ ಶಾಸಕರಾದ ಕ್ಷಣದಿಂದಲೂ ಸ್ವಾಸ್ಥ್ಯವನ್ನು ಅತ್ಯಂತ ಜತನದಿಂದ ನೋಡಿಕೊಂಡಿದ್ದಾರೆ. ಎರಡು ಮೆಗಾ ಹೆಲ್ತ್ ಕ್ಯಾಂಪ್‌ಗಳೂ ಸೇರಿದಂತೆ ಆರು ವೈದ್ಯಕೀಯ ಶಿಬಿರಗಳು… Continue Reading
  • ಅಕ್ಷರ ಕ್ರಾಂತಿಯ ಹೊಸ ಅಧ್ಯಾಯ - ಅರವಿಂದ ಲಿಂಬಾವಳಿ ಶಿಕ್ಷಣ ರಂಗದಲ್ಲೇ ಹೋರಾಟ ಮಾಡುತ್ತಲೇ ಬೆಳೆದ ಯುವ ನಾಯಕರು. ಶಾಸಕರಾದ ಮೇಲೆ ಮಹದೇವಪುರದಲ್ಲಿ ಶಿಕ್ಷಣ ಕ್ರಾಂತಿಗೆ ಅವರು ಮಾಡಿದ ಯತ್ನಗಳನ್ನು ಕಣ್ಣಾರೆ ಕಾಣಬಹುದು. ವರ್ತೂರು… Continue Reading
  • ಮನೆಗೆ ದೀಪ, ಬೀದಿಗೆ ಬೆಳಕು - ೨೦೦೮ರಲಿ ಮಹದೇವಪುರ ಕ್ಷೇತ್ರದ ಹಲವು ಪ್ರದೇಶಗಳು ಬೀದಿ ದೀಪಗಳಿಂದ ವಂಚಿತವಾಗಿದ್ದವು. ವಿದ್ಯುತ್ ಲೈನ್‌ಗಳೂ ಇಲ್ಲ, ಕಂಬಗಳೂ ಇಲ್ಲದಂಥ ಸ್ಥಿತಿ. ಅರವಿಂದ ಲಿಂಬಾವಳಿಯವರು ವಿದ್ಯುತ್ ಸಂಪರ್ಕ, ಬೀದಿ ದೀಪ,… Continue Reading

Sharing is caring!