ಲೋಕಸಭಾ ಚುನಾವಣಾ ಅಂಗವಾಗಿ ತೆಲಂಗಾಣದ ಮೆಹಬೂಬ್‌ನಗರದಲ್ಲಿ ನಡೆದ ಮಾನ್ಯ ಪ್ರಧಾನಿಯವರಾದ ಶ್ರೀ ನರೇಂದ್ರ ಮೋದಿ ಅವರ ಬೃಹತ್ ರ‌್ಯಾಲಿಯಲ್ಲಿ ಭಾಗವಹಿಸಿದ್ದೆ. ಭ್ರಷ್ಟಾಚಾರ, ಹಗರಣಗಳ ಮೂಲಕ ದೇಶ ಕೊಳ್ಳೆ ಹೊಡೆದ ಕಾಂಗ್ರೆಸ್ ಅನ್ನು ಅಧಿಕಾರದಿಂದ ದೂರ ಇಡಬೇಕು. ಸಾಕಷ್ಟು ಜನಪರ ಯೋಜನೆಗಳ ಮೂಲಕ ಕೇವಲ ಐದು ವರ್ಷಗಳಲ್ಲಿ ದೇಶವನ್ನು ವಿಶ್ವಮಾನ್ಯವನ್ನಾಗಿಸಿದ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಸಂಕಲ್ಪ ಮಾಡಬೇಕು ಎಂದು ಪ್ರಧಾನಿ ಮೋದಿ ಜೀ ಅವರು ಹೇಳಿದರು. ಈ ವೇಳೆ ಪಕ್ಷದ ಮುಖಂಡರು, ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.