ಹೂಡಿಯ ರೈಲ್ವೆ ನಿಲ್ದಾಣದಲ್ಲಿ ಮಾನ್ಯ ಸಂಸದರಾದ ಶ್ರೀ ಪಿ.ಸಿ.ಮೋಹನ್ ಅವರ ‘ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ’ಯಿಂದ ಮೂರು ಕೋಟಿ ಒಂದು ಲಕ್ಷ ರುಪಾಯಿ ಅನುದಾನದಲ್ಲಿ ಹಾಲ್ಟ್ ಸ್ಟೇಷನ್, ಎರಡು ಪ್ಲಾಟ್‌ಫಾರಂ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ಪಾದಚಾರಿ ಮೇಲ್ಸೇತುವೆ, ಕಲ್ಲಿನ 20 ಬೆಂಚು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಲೋಕಾರ್ಪಣೆ ಮಾಡಲಾಯಿತು.