ಲೋಕಸಭಾ ಚುನಾವಣೆ ನಿಮಿತ್ತ ಚಿಕ್ಕಬಳ್ಳಾಪುರ ಭೋವಿ ಸಮಾಜದ ಬಿಜೆಪಿ ಪದಾಧಿಕಾರಿಗಳ ಜೊತೆಗೆ ಸಭೆ ನಡೆಸಲಾಯಿತು. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ ಬಹುಮತಗಳಿಂದ ಗೆಲ್ಲಿಸುವ ಹೊಣೆ ಎಲ್ಲರದ್ದಾಗಿದೆ. ಸಶಕ್ತ ಮತ್ತು ಸದೃಢ ಭಾರತಕ್ಕಾಗಿ ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗಬೇಕಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಿದೆ ಎಂದು ತಿಳಿಸಲಾಯಿತು. ಈ ವೇಳೆ ಭೋವಿ ಸಮಾಜದ ಮುಖಂಡರು, ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.