ಕನ್ನಮಂಗಲ ಗ್ರಾಮ ಪಂಚಾಯಿತಿ ಮತ್ತು ಮಹದೇವಪುರ ಪರಿಸರ ಕಾರ್ಯಪಡೆ ಹಾಗೂ ಫೋರ್ಸ್ ಜಿ.ಡಬ್ಲ್ಯೂ ಸಹಯೋಗದಲ್ಲಿ ಪಿಪಿಪಿ ಮಾದರಿಯಲ್ಲಿ ಕನ್ನಮಂಗಲ ಕೆರೆ ಅಭಿವೃದ್ಧಿಗೆ ಚಾಲನೆ ನೀಡಲಾಯಿತು. ಕೆರೆ ಅಭಿವೃದ್ಧಿಯ ಜೊತೆಗೆ ಸುತ್ತಮುತ್ತಲು ಸಸಿಗಳನ್ನು ನೆಟ್ಟು ಉತ್ತಮ ಪರಿಸರ ವಾತಾವರಣ ನಿರ್ಮಾಣ ಮಾಡಬೇಕು. ಕೆರೆಯನ್ನು ಸರಿಯಾಗಿ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಸಾರ್ವಜನಿಕರಿಗೆ ತಿಳಿಸಲಾಯಿತು. ಈ ವೇಳೆ ಮಾನ್ಯ ಸಂಸದರಾದ ಶ್ರೀ ಪಿ.ಸಿ.ಮೋಹನ್ ಅವರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.