ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ನಡೆಸುತ್ತಿರುವ ಗೂಂಡಾಗಿರಿಯನ್ನು ಖಂಡಿಸಿ ಹಾಗೂ ಬೆಂಗಳೂರು ನಗರವನ್ನು ಅಭಿವೃದ್ಧಿ ಪಥದೆಡೆಗೆ ಕೊಂಡೊಯ್ಯಲು ರಾಜ್ಯ ಸರ್ಕಾರ ವಿಫಲಗೊಂಡಿರುವುದನ್ನು ಜನರ ಗಮನಕ್ಕೆ ತರುವ ಉದ್ದೇಶದಿಂದ ಇಂದು ‘ಬೆಂಗಳೂರು ರಕ್ಷಿಸಿ’ ಯಾತ್ರೆಗೆ ಚಾಲನೆ ನೀಡಲಾಯಿತು.

ಬಸವನಗುಡಿಯ ದೊಡ್ಡಗಣೇಶ ದೇವಸ್ಥಾನದ ಬಳಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ಮತ್ತು ಬಿಜೆಪಿ ರಾಜ್ಯ ಉಸ್ತುವಾರಿ ಶ್ರೀ ಪ್ರಕಾಶ್ ಜಾವಡೇಕರ್ ಅವರು ಈ ಯಾತ್ರೆಗೆ ಚಾಲನೆ ನೀಡಿದರು.

ಮುಂಬರುವ ದಿನಗಳಲ್ಲಿ ಈ ಯಾತ್ರೆಯು ಬೆಂಗಳೂರಿನ ಬೇರೆ ಬೇರೆ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದ್ದು, ಕಾಂಗ್ರೆಸ್ ವಿರುದ್ಧ ಜನಾಭಿಪ್ರಾಯ ರೂಪಿಸಲಿದೆ. ಬೆಂಗಳೂರನ್ನು ಕಾಡುತ್ತಿರುವ ಸಮಸ್ಯೆಗಳಾದ ಗೂಂಡಾಗಿರಿ, ಕೆಟ್ಟು ಹೋದ ರಸ್ತೆಗಳು, ವಾಹನ ದಟ್ಟಣೆ, ಹಾಡುಹಗಲೇ ಸರಗಳ್ಳತನ, ಕೆರೆ ನಿರ್ವಹಣೆಯಲ್ಲಿ ವೈಫಲ್ಯ, ಮೂಲಭೂತ ಸೌಕರ್ಯಗಳ ಕೊರತೆ – ಮುಂತಾದ ವಿಚಾರಗಳ ಮೇಲೆ ಈ ಯಾತ್ರೆ ಬೆಳಕು ಚೆಲ್ಲಲಿದೆ.