ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಂಡೂರಿನಲ್ಲಿ ನೂತನವಾಗಿ ನಿರ್ಮಿಸಿರುವ ಘಟಕದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ನಾನು ಮಾತನಾಡಿದೆ.
ಸಾರಿಗೆ ಸಚಿವರಾದ ಎಚ್.ಎಂ. ರೇವಣ್ಣ ಘಟಕವನ್ನು ಉದ್ಘಾಟಿಸಿದರು.
ಇದೇ ವೇಳೆ ಇಲ್ಲಿನ ಗ್ರಾಮೀಣ ಭಾಗದಲ್ಲಿ ಸಾರಿಗೆ ಬಸ್ಸುಗಳ ಕೊರತೆ ಇರುವುದನ್ನು ಸಚಿವರ ಗಮನಕ್ಕೆ ತರಲಾಯಿತು ಹಾಗೂ ಹೊಸ ಬಸ್ಸು ಮಾರ್ಗಗಳನ್ನು ಪರಿಚಯಿಸಲು ವಿನಂತಿಸಲಾಯಿತು. 
ಈ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ಸಚಿವರು, ಕೂಡಲೇ ಈ ಕುರಿತು ತಕ್ಷಣವೇ ಕಾರ್ಯಪ್ರವೃತ್ತರಾಗುವುದಾಗಿ ಭರವಸೆ ನೀಡಿದರು.