೨೦೦೮ರಲಿ ಮಹದೇವಪುರ ಕ್ಷೇತ್ರದ ಹಲವು ಪ್ರದೇಶಗಳು ಬೀದಿ ದೀಪಗಳಿಂದ ವಂಚಿತವಾಗಿದ್ದವು. ವಿದ್ಯುತ್ ಲೈನ್‌ಗಳೂ ಇಲ್ಲ, ಕಂಬಗಳೂ ಇಲ್ಲದಂಥ ಸ್ಥಿತಿ. ಅರವಿಂದ ಲಿಂಬಾವಳಿಯವರು ವಿದ್ಯುತ್ ಸಂಪರ್ಕ, ಬೀದಿ ದೀಪ, ಗುಣಮಟ್ಟದ ವಿದ್ಯುತ್, ಗ್ರಾಮೀಣ ಪ್ರದೇಶಕ್ಕೂ ನಗರಮಟ್ಟದ ವಿದ್ಯುತ್ – ಹೀಗೆ ಎಲ್ಲ ಅಗತ್ಯಗಳನ್ನೂ ಪೂರೈಸುವಲ್ಲಿ ಯಶ ಪಡೆದಿದ್ದಾರೆ.

 • ಎಲ್ಲಾ ಪ್ರಮುಖ ರಸ್ತೆಗಳಲ್ಲಿ, ಗಲ್ಲಿ ರಸ್ತೆಗಳಲ್ಲಿ ಸಾರ್ವಜನಿಕರು ನಿರ್ಭಯವಾಗಿ ಸಂಚರಿಸಲು ಅನುಕೂಲವಾಗುವಂತೆ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಪ್ರಮುಖ ಬೀದಿಗಳಲ್ಲಿ ಎರಡೂ ಬದಿ ಚಾಚಿರುವ ಸೋಡಿಯಂ ದೀಪಗಳ ಸ್ತಂಭಗಳನ್ನು ಸ್ಥಾಪಿಸಿ ಎಲ್ಲ ದೀಪಗಳೂ ಉರಿಯುವಂತೆ ನಿಗಾ ವಹಿಸಲಾಗುತ್ತಿದೆ.
 • ಬೇಲೂರು ಅಂಬೇಡ್ಕರ್ ನಗರದಲ್ಲಿ ಸ್ವಾತಂತ್ರ್ಯ ಬಂದ ನಂತರ ಈವರೆಗೂ ವಿದ್ಯುತ್ ಸಂಪರ್ಕವೇ ಇರಲಿಲ್ಲ. ಎಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಿರುವ ಈ ಪ್ರದೇಶದ ಜನರಿಗೆ ವಿಮಾನಗಳು ಸೂಸುವ ಬೆಳಕೇ ರಾತ್ರಿಯ ಬದುಕಿಗೆ ಆಧಾರವಾಗಿತ್ತು. ಅರವಿಂದ ಲಿಂಬಾವಳಿಯವರ ಪ್ರಯತ್ನದಿಂದ ಈ ಪ್ರದೇಶದ ಮನೆಗಳಿಗೆ, ಬೀದಿಗಳಿಗೆ ವಿದ್ಯುತ್ ಸಂಪರ್ಕ ಬಂದಿದೆ.
 • ಕ್ಷೇತ್ರದ ಎಲ್ಲಾ ಮಾರ್ಗಗಳಲ್ಲೂ ಸ್ವಯಂಚಾಲಿತ ನಿಯಂತ್ರಣ ಪ್ಯಾನೆಲ್‌ಗಳನ್ನು ಅಳವಡಿಸಲಾಗಿದ್ದು ಇದರಿಂದ ವಿದ್ಯುತ್ ಪೋಲಾಗದಂತೆ ನೋಡಿಕೊಳ್ಳಲಾಗಿದೆ.
 • ಕ್ಷೇತ್ರದ ಎಲ್ಲ ಗ್ರಾಮಾಂತರ ಪ್ರದೇಶಗಳಿಗೂ ಬೆಂಗಳೂರು ಮಹಾನಗರಕ್ಕೆ ಸರಬರಾಜಾಗುತ್ತಿರುವ ಗುಣಮಟ್ಟದ ವಿದ್ಯುತ್ ಸಂಪರ್ಕವನ್ನೇ ವಿಸ್ತರಿಸಲಾಗಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶಗಳಲ್ಲೂ ನಿರಂತರ, ಗುಣಮಟ್ಟದ ವಿದ್ಯುತ್ ದೊರೆಯುತ್ತಿದೆ.
 • ಗ್ರಾಮಾಂತರ ಪ್ರದೇಶಗಳಲ್ಲಿ ೧೫೩ ವಿದ್ಯುತ್ ಪರಿವರ್ತಕ (ಟ್ರಾನ್ಸ್‌ಫಾರ್ಮರ್)ಗಳನ್ನು ಅಳವಡಿಸಲಾಗಿದೆ.
 • ಇಪಿಐಪಿ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಅಡಚಣೆಯಿಲ್ಲದ ವಿದ್ಯುತ್ ಸರಬರಾಜಿಗಾಗಿ ನೆಲದಡಿ ಕೇಬಲ್‌ಗಳನ್ನು ಅಳವಡಿಸಲಾಗಿದೆ.
 • ನಗರ ಪ್ರದೇಶದ ಪಾದಚಾರಿ ಮಾರ್ಗಗಳಲ್ಲಿ ಅಪಾಯಕಾರಿಯಾಗಿ ಎರಡು ಕಂಬಗಳ ನಡುವೆ ಸ್ಥಾಪನೆಯಾಗಿದ್ದ ಟ್ರಾನ್ಸ್‌ಫಾರ್ಮರ್‌ಗಳನ್ನು ಸೂಕ್ತವಾಗಿ ಬದಿಗೆ ಸರಿಸಿ ಏಕಸ್ತಂಭದಲ್ಲಿ ಅಳವಡಿಸಲಾಗಿದೆ.
 • ವರ್ತೂರಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ವಿದ್ಯುತ್ ಶುಲ್ಕ ಪಾವತಿಗಾಗಿ ಕ್ಯಾಶ್ ಕೌಂಟರ್ ಆರಂಭಿಸಲಾಗಿದೆ.
 • ವೈಟ್‌ಫೀಲ್ಡ್‌ನಲ್ಲಿ ಗ್ರಾಹಕರ ಸೇವಾ ಕೇಂದ್ರ ಸ್ಥಾಪಿಸಲಾಗಿದೆ.

 • ಹೂಡಿಯಲ್ಲಿ ೪೦೦/೨೨೦ ಕೆವಿ ಸ್ಥಾವರದಲ್ಲಿ ೧೦೦ ಎಂವಿಎ ಟ್ರಾನ್ಸ್‌ಫಾರ್ಮರ್ ಅಳವಡಿಸುವ ಕಾಮಗಾರಿ ಹಾಗೂ ಇಪಿಐಪಿ ಪ್ರದೇಶದಲ್ಲಿ ೨೦೦/೬೬ ಕೆವಿ ಗ್ಯಾಸ್ (ಜಿಐಎಸ್) ಸ್ಟೇಶನ್ ಕಾಮಗಾರಿಯು ಪ್ರಗತಿಯಲ್ಲಿದೆ. ಇದರಿಂದ ಆ ಪ್ರದೇಶಗಳ ಜನತೆಗೆ ಹೆಚ್ಚಿನ ಗುಣಮಟ್ಟದ ವಿದ್ಯುತ್ ಸರಬರಾಜಾಗಲಿದೆ.
 • ಕಾಡುಗೋಡಿಯಲ್ಲಿ ಕಾರ್ಯ ಮತ್ತು ಪಾಲನಾ ಘಟಕವನ್ನು ೨೦೧೦ರಿಂದ ಸ್ಥಾಪಿಸಿ ಈ ಹಿಂದೆ ಹೊಸಕೋಟೆ ಗ್ರಾಮಾಂತರ ವ್ಯಾಪ್ತಿಯಲ್ಲಿದ್ದ ಪ್ರದೇಶಗಳ ಗ್ರಾಹಕರಿಗೆ ಅನುಕೂಲ ಮಾಡಲಾಗಿದೆ.

ಸಾಧನೆಗಳು ೨೦೦೮-೧೩

 • ಸಾಧನೆಯ ಹಾದಿಯಲ್ಲಿ ಶಿಕ್ಷಣ ಕ್ಷೇತ್ರ - ಕರ್ನಾಟಕ ರಾಜ್ಯವು ಹಲವು ದಶಕಗಳಿಂದಲೂ ದೇಶದಲ್ಲೇ ಮುಂಚೂಣಿಯಲ್ಲಿರುವ ಉನ್ನತ ಶಿಕ್ಷಣ ಕೇಂದ್ರವಾಗಿದೆ. ಅದರಲ್ಲೂ ಎಂಬತ್ತರ ದಶಕದಿಂದೀಚೆಗೆ ಕರ್ನಾಟಕದಲ್ಲಿ ನೂರಾರು ಕಾಲೇಜುಗಳು ಸ್ಥಾಪನೆಗೊಂಡಿವೆ. ೨೦೦೮ರ ಹೊತ್ತಿಗೆ ಶಿಕ್ಷಣ ರಂಗವು ಹಲವು… Continue Reading
 • ಶಿಬಿರ,ಮೇಳ,ಉತ್ಸವಗಳ ಸರಮಾಲೆ - ಮಹದೇವಪುರ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಹತ್ತು ಹಲವು ಮೇಳಗಳು ನಡೆದಿವೆ. ನಾಡಿನ ಮಹಾಪುರುಷರ ಜಯಂತಿಗಳನ್ನೂ ವಿಜೃಂಭಣೆಯಿಂದ ಆಚರಿಸಲಾಗಿದೆ.ಯುಗಾದಿ ಹಬ್ಬವೇ ಮಹದೇವಪುರ ಮೇಳವಾಗಿ ರೂಪಾಂತರಗೊಂಡು ಸಾವಿರಾರು ಕುಟುಂಬಗಳನ್ನು… Continue Reading
 • ಧಾರ್ಮಿಕತೆ, ಸಾಮರಸ್ಯದ ತಂಗಾಳಿ - ಸ್ವಾಮಿ ವಿವೇಕಾನಂದ, ವೇಮನ, ಕೆಂಪೇಗೌಡ, ಬಸವೇಶ್ವರ, ಕನಕದಾಸರು, ಡಾ|| ಬಿ.ಆರ್. ಆಂಬೇಡ್ಕರ್, ಬಾಬು ಜಗಜೀವನರಾಂ, ದ್ರೌಪದಮ್ಮ, ಸಿದ್ಧರಾಮೇಶ್ವರರು, ಸ್ವಾಮಿ ಯೋಗಿನಾರಾಯಣ, ಸೋದರಿ ನಿವೇದಿತಾ, ಪಂ| ದೀನದಯಾಳ ಉಪಾಧ್ಯಾಯ… Continue Reading
 • ಕಾದಿದ್ದರು ೩೦ ವರ್ಷ; ಈಗ ಮೂಡಿತು ಹರ್ಷ! - ಎಲ್ಲೆಲ್ಲೂ ಶಾಂತಿ-ಸೌಹಾರ್ದ; ಅಪರಾಧ ಪ್ರಮಾಣ ಇಳಿಕೆ: ಬೆಂಗಳೂರು ನಗರದ ಸರಾಸರಿ ಅಪರಾಧ ಪ್ರಮಾಣ ಹೆಚ್ಚಾಗುತ್ತಿದ್ದರೆ, ಮಹದೇವಪುರ ಕ್ಷೇತ್ರದಲ್ಲಿ ಅಪರಾಧಪ್ರಮಾಣವು ಏನಿಲ್ಲೆಂದರೂ ಶೇ. ೨೫ರಷ್ಟು ಕಡಿಮೆಯಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ… Continue Reading
 • ಸಾಮಾಜಿಕ ಅಭ್ಯುದಯದ ದೃಢ ಹೆಜ್ಜೆಗಳು - ಯುವಕರಿಗೆ ಕೆಲಸ ದೊರಕಿಸಲು ಉದ್ಯೋಗ ಮೇಳ, ಸಾರ್ವಜನಿಕ ಬಳಕೆಗಾಗಿ ಹಲವೆಡೆ ಸಮುದಾಯ ಭವನಗಳು, ಸುರಕ್ಷತೆಗಾಗಿ ಪೊಲೀಸ್ ಠಾಣೆ, ಅಗ್ನಿಶಾಮಕ ಠಾಣೆ, ಸುಸಜ್ಜಿತ ವಿದ್ಯುತ್ ಚಿತಾಗಾರ, ದುರ್ಬಲರು, ಅಶಿಕ್ಷಿತರಿಗೆ… Continue Reading
 • ಅಪಾರ್ಟ್ಮೆಂಟ್ ನಿವಾಸಿಗಳ ಬವಣೆ ಪರಿಹಾರ - ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಅಪಾರ್ಟ್‌ಮೆಂಟ್‌ಗಳಿವೆ. ಇಲ್ಲಿನ ನಿವಾಸಿಗಳು ರೆಸಿಡೆಂಟ್ ವೆಲ್‌ಫೇರ್ ಅಸೋಸಿಯೇಶನ್ ಸ್ಥಾಪಿಸಿಕೊಂಡಿದ್ದಾರೆ. ಅರವಿಂದ ಲಿಂಬಾವಳಿಯವರ ಬಳಿ ಅವರು ಹಲವು ಸಮಸ್ಯೆಗಳ ಬಗ್ಗೆ ನಿವೇದಿಸಿಕೊಂಡಿದ್ದರು. ಅವುಗಳಲ್ಲಿ… Continue Reading
 • ಇಪಿಐಪಿ ಅಭಿವೃದ್ಧಿಯ ಯಶೋಗಾಥೆ - ವೈಟ್‌ಫೀಲ್ಡ್‌ನ ಇಪಿಐಪಿ ವಲಯದಲ್ಲಿ ರಸ್ತೆ, ಮಳೆ ನೀರು ಕೊಯ್ಲು, ಕಾಲುದಾರಿ ಸುಧಾರಣೆ ಮತ್ತು ಡಾಂಬರೀಕರಣದ ಕೆಲಸಗಳು ಭರದಿಂದ ಸಾಗಿವೆ. ಇಲ್ಲಿನ ನಾಲ್ಕು ಸಾಲಿನ (೪ ಲೇನ್) ೫.೫… Continue Reading
 • ಸಾರಿಗೆ ವ್ಯವಸ್ಥೆಯಲ್ಲಿ ಸುಧಾರಣೆ - ಕಳೆದ ನಾಲ್ಕು ವರ್ಷಗಳಲ್ಲಿ ಮಹದೇವಪುರದ ಸಾರಿಗೆ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ರೂಪಾಂತರಿಸಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಮಹದೇವಪುರಕ್ಕೆ ಪ್ರತಿ ನಿಮಿಷಕ್ಕೆ ಒಂದರಂತೆ ವೋಲ್ವೋ ಬಸ್ (ಸಂಖ್ಯೆ ೩೩೫ಇ) ಸೌಕರ್ಯವನ್ನು… Continue Reading
 • ಆರೋಗ್ಯಕ್ಕೆ ಆದ್ಯತೆ - ಈಗ ಆರೋಗ್ಯ ಸಚಿವರಾಗಿರುವ ಅರವಿಂದ ಲಿಂಬಾವಳಿಯವರು ಮಹದೇವಪುರದ ಶಾಸಕರಾದ ಕ್ಷಣದಿಂದಲೂ ಸ್ವಾಸ್ಥ್ಯವನ್ನು ಅತ್ಯಂತ ಜತನದಿಂದ ನೋಡಿಕೊಂಡಿದ್ದಾರೆ. ಎರಡು ಮೆಗಾ ಹೆಲ್ತ್ ಕ್ಯಾಂಪ್‌ಗಳೂ ಸೇರಿದಂತೆ ಆರು ವೈದ್ಯಕೀಯ ಶಿಬಿರಗಳು… Continue Reading
 • ಅಕ್ಷರ ಕ್ರಾಂತಿಯ ಹೊಸ ಅಧ್ಯಾಯ - ಅರವಿಂದ ಲಿಂಬಾವಳಿ ಶಿಕ್ಷಣ ರಂಗದಲ್ಲೇ ಹೋರಾಟ ಮಾಡುತ್ತಲೇ ಬೆಳೆದ ಯುವ ನಾಯಕರು. ಶಾಸಕರಾದ ಮೇಲೆ ಮಹದೇವಪುರದಲ್ಲಿ ಶಿಕ್ಷಣ ಕ್ರಾಂತಿಗೆ ಅವರು ಮಾಡಿದ ಯತ್ನಗಳನ್ನು ಕಣ್ಣಾರೆ ಕಾಣಬಹುದು. ವರ್ತೂರು… Continue Reading