ಮಹದೇವಪುರ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ವಿಭಾಗದ ಬಿಜೆಪಿ ಜನಜಾಗೃತಿ ಸಮಾವೇಶ ಇಂದು ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿ, ಮಹದೇವಪುರ ಕ್ಷೇತ್ರದ ಅಭಿವೃದ್ಧಿಗೆ ನಾನು ನೀಡಿರುವ ಕೊಡುಗೆಯನ್ನು ಉಲ್ಲೇಖಿಸಿದೆ.
ಜೊತೆಗೆ ರಾಜ್ಯದಲ್ಲಿ ಅತೀ ಹೆಚ್ಚು ತೆರಿಗೆ ಪಾವತಿಸುವ ನನ್ನ ಕ್ಷೇತ್ರವು ಕಾಂಗ್ರೆಸ್ ಸರ್ಕಾರದ ತಾರತಮ್ಯ ನೀತಿಯಿಂದಾಗಿ ಹೇಗೆ ಅನ್ಯಾಯಕ್ಕೆ ಒಳಗಾಗಿದೆ ಎನ್ನುವುದನ್ನು ವಿವರಿಸಿದೆ.
ಕಾರ್ಯಕ್ರಮದಲ್ಲಿ ಹಿರಿಯ ಬಿಜೆಪಿ ನಾಯಕ ಶ್ರೀ ಬಿ.ಎನ್. ಬಚ್ಚೇಗೌಡ ಹಾಗೂ ಸಂಸದರಾದ ಶ್ರೀ ಪಿ.ಸಿ. ಮೋಹನ್ ಹಾಜರಿದ್ದರು.