ಮಹದೇವಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮಂತ್ರಿ ಶ್ರೀ ಅರವಿಂದ ಲಿಂಬಾವಳಿ ಅವರು ರೈತ ನಾಯಕ ಪುಟ್ಟಣ್ಣಯ್ಯ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಮೇಲುಕೋಟೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಪುಟ್ಟಣ್ಣಯ್ಯ ಅವರು ಭಾನುವಾರ ಸಂಜೆ ಹೃದಯಾಘಾತದಿಂದ ನಿಧನರಾದರು.

ಪುಟ್ಟಣ್ಣಯ್ಯ ಅವರು ರೈತರ ಏಳಿಗೆಗೆ ನೀಡಿರುವ ಕೊಡುಗೆಯನ್ನು ಶ್ಳಾಘಿಸಿದ ಲಿಂಬಾವಳಿ ಅವರು, ಇವರ ಸಾವಿನಿಂದಾಗಿ ರೈತ ಸಮುದಾಯಕ್ಕೆ ದೊಡ್ಡ ನಷ್ಟವಾಗಿದೆ ಎಂದಿದ್ದಾರೆ ಹಾಗೂ ದಿವಂಗತ ಪುಟ್ಟಣ್ಣಯ್ಯ ಅವರ ಆತ್ಮಕ್ಕೆ ಚಿರಶಾಂತಿ ಕೋರಿದ್ದಾರೆ.