ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಗೆ ಪ್ರತಿಯಾಗಿ ಭಾರತೀಯ ವಾಯುಸೇನೆಯು ಪಾಕಿಸ್ತಾನದ ಗಡಿ ಪ್ರದೇಶದೊಳಗೆ ನುಗ್ಗಿ ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆಸುವ ಮೂಲಕ 300ಕ್ಕೂ ಅಧಿಕ ಉಗ್ರರನ್ನು ಬಲಿ ಪಡೆದಿದೆ. ಈ ಸಂತಸಕ್ಕಾಗಿ ಹುಬ್ಬಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು, ಸಹ್ರಸಾರು ಸಂಖ್ಯೆಯ ಸಾರ್ವಜನಿಕರೊಂದಿಗೆ ಸೇರಿ ವಿಜಯೋತ್ಸವ ಆಚರಿಸಲಾಯಿತು.