ಕಾಂಗ್ರೆಸ್ ಸರ್ಕಾರದ ನೇತೃತ್ವದಲ್ಲಿ ರಾಜ್ಯದ ರಾಜಧಾನಿಯಲ್ಲಿ ನಡೆಯುತ್ತಿರುವ ಗೂಂಡಾಗಿರಿಯನ್ನು ಖಂಡಿಸಿ ನಡೆಯುತ್ತಿರುವ ‘ಬೆಂಗಳೂರು ರಕ್ಷಿಸಿ’ ಪಾದಯಾತ್ರೆ ಇಂದು ಹೆಬ್ಬಾಳ ತಲುಪಿತು.
ಈ ಸಂದರ್ಭದಲ್ಲಿ ನೆರೆದಿದ್ದ ಜನಸ್ತೋಮವನ್ನು ಉದ್ದೇಶಿಸಿ ನಾನು ಮಾತನಾಡಿದೆ ಹಾಗೂ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದಾಗಿ ರಾಜ್ಯ ರಾಜಧಾನಿಯ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದೆ.
ಸಹಸ್ರಾರು ಸಂಖ್ಯೆಯಲ್ಲಿ ಈ ಪಾದಯಾತ್ರೆಯಲ್ಲಿ ಭಾಗವಹಿಸಿದ ಜನರು ಕಾಂಗ್ರೆಸ್ ಪಕ್ಷದ ಗೂಂಡಾಗಿರಿ ಮತ್ತು ದುರಾಡಳಿತಕ್ಕೆ ಕೊನೆ ಹಾಡುವ ಪಣ ತೊಟ್ಟರು. ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್, ಹೆಬ್ಬಾಳದ ಶಾಸಕರಾದ ವೈ.ಎ. ನಾರಾಯಣಸ್ವಾಮಿ ಮತ್ತು ಇತರ ಬಿಜೆಪಿ ಮುಖಂಡರು ಹಾಜರಿದ್ದರು.
ಹೆಬ್ಬಾಳದಲ್ಲಿ ‘ಬೆಂಗಳೂರು ರಕ್ಷಿಸಿ’ ಪಾದಯಾತ್ರೆಗೆ ಭಾರೀ ಪ್ರತಿಕ್ರಿಯೆ
