ಹೊಸ ಪಾಲಿಟೆಕ್ನಿಕ್, ಕಾಲೇಜು, ಗ್ರಂಥಾಲಯ…

ಹೂಡಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಪ್ರತ್ಯೇಕ ಕಟ್ಟಡ

ಹೂಡಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಪ್ರತ್ಯೇಕ ಕಟ್ಟಡ ನಿರ್ಮಾಣ ಮಾಡಿ ಪಾಳಿ ಪದ್ಧತಿಯಲ್ಲಿ ನಡೆಯುತ್ತಿದ್ದ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜನ್ನು ಬೇರ್ಪಡಿಸಿ ಪದವಿ ಪೂರ್ವ ಕಾಲೇಜನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ.

ವರ್ತೂರು ಮತ್ತು ಕಾಡುಗೋಡಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು

ವರ್ತೂರು ಮತ್ತು ಕಾಡುಗೋಡಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಪ್ರಾರಂಭವಾಗಿವೆ. ವರ್ತೂರು ಪ್ರಥಮ ದರ್ಜೆ ಕಾಲೇಜು ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ; ಕಾಡುಗೋಡಿಯಲ್ಲಿ ಕಟ್ಟಡ ಕಾಮಗಾರಿ ಪ್ರಾರಂಭವಾಗಬೇಕಿದೆ.

ತೂಬರಹಳ್ಳಿಯಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಕಟ್ಟಡ ನಿರ್ಮಾಣ

ತೂಬರಹಳ್ಳಿ ಗ್ರಂಥಾಲಯ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು ಗ್ರಂಥಾಲಯ ಇಲಾಖೆಗೆ ಹಸ್ತಾಂತರಿಸಿದೆ. ಆದರೆ ಸರ್ಕಾರದ ನಿರ್ಲಕ್ಷ್ಯದಿಂದ ಕಾರ್ಯಾರಂಭವಾಗಿಲ್ಲ.

ಇಮ್ಮಡಿಹಳ್ಳಿ ಮತ್ತು ಚನ್ನಸಂದ್ರದಲ್ಲಿ ಸರ್ಕಾರಿ ಪಾಲಿಟೆಕ್ನಿಕ್‌ಗಳು

ಇಮ್ಮಡಿಹಳ್ಳಿ ಮತ್ತು ಚನ್ನಸಂದ್ರದಲ್ಲಿ ಸರ್ಕಾರಿ ಪಾಲಿಟೆಕ್ನಿಕ್‌ಗಳು ಪ್ರಾರಂಭವಾಗಿವೆ, ಇಮ್ಮಡಿಹಳ್ಳಿಯಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಚನ್ನಸಂದ್ರದಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಅಧಿಕೃತ ಉದ್ಘಾಟನೆ ಆಗದಿದ್ದರೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತರಗತಿಗಳು ನಡೆದಿವೆ.

ಸಾಧನೆಗಳು ೨೦೧೮ – 2