ಕೋಲಾರದಲ್ಲಿ ನಡೆದ ಭೋವಿ ಸಮಾಜದ ಮುಖಂಡರ ಸಭೆಯಲ್ಲಿ ಭಾಗವಹಿಸಿದ್ದೆ. ಹಿಂದುಳಿದಿದ್ದ ಈ ಸಮಾಜ ಕೇಂದ್ರ ಸರಕಾರ ಬಿಡುಗಡೆ ಮಾಡಿದ ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡು ಅಭಿವೃದ್ಧಿಯತ್ತ ಸಾಗಿದೆ. ಸಮಾಜ ಮತ್ತು ದೇಶ ಮತ್ತಷ್ಟು ಪ್ರಗತಿ ಸಾಧಿಸಲು ಶ್ರೀ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕು. ಈ ನಿಟ್ಟಿನಲ್ಲಿ ಎಲ್ಲ ಭೋವಿ ಸಮುದಾಯದವರು ಬಿಜೆಪಿಯನ್ನು ಬೆಂಬಲಿಸಿ ಗೆಲ್ಲಿಸಬೇಕು ಎಂದು ತಿಳಿಸಲಾಯಿತು. ಈ ವೇಳೆ ಭೋವಿ ಸಮಾಜದ ಅನೇಕ ಮುಖಂಡರು ಉಪಸ್ಥಿತರಿದ್ದರು.