ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಹಾಗೂ ಭಯೋತ್ಪಾದನೆ ವಿರುದ್ಧ ಪ್ರತಿಭಟನಾ ಧರಣಿಯನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಮಾನ್ಯ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮೌರ್ಯ ಹೋಟೆಲ್ ಮುಂಭಾಗದ ಗಾಂಧಿ ಪ್ರತಿಮೆ ಎದುರು ಹಮ್ಮಿಕೊಳ್ಳಲಾಗಿತ್ತು. ಭಯೋತ್ಪಾದನೆಗೆ ಕುಮ್ಮಕ್ಕು ನೀಡುವವರಿಗೆ, ಯೋಧರ ಮೇಲೆ ದಾಳಿ ನಡೆಸಿ ಹೇಡಿತನ ಪ್ರದರ್ಶಿಸಿದ ಪಾಕಿಸ್ತಾನಕ್ಕೆ ಕೇಂದ್ರ ಸರಕಾರ ತಕ್ಕ ಪಾಠ ಕಲಿಸಲಿದೆ. ನಾವೆಲ್ಲರೂ ಕೇಂದ್ರದ ನಿರ್ಧಾರ ಬೆಂಬಲಿಸುವ ಮೂಲಕ ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡಬೇಕಿದೆ ಎಂದು ತಿಳಿಸಲಾಯಿತು. ಈ ವೇಳೆ ಪಕ್ಷದ ಮುಖಂಡರು, ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಸಾರ್ವಜನಿಕರು, ದೇಶಾಭಿಮಾನಿಗಳು ಭಾಗವಹಿಸಿದ್ದರು.

ಪುಲ್ವಾಮಾದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಶ್ರದ್ಧಾಂಜಲಿ ಮತ್ತು ಭಯೋತ್ಪಾದನೆ ವಿರುದ್ಧ ಪ್ರತಿಭಟನಾ ಧರಣಿಯಲ್ಲಿ ಮಾತನಾಡಿದೆ.

Posted by Arvind Limbavali on Sunday, February 17, 2019